ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದುವೆಯಾಗಲು ಕನ್ಯೆ ಸಿಗಲಿಲ್ಲ ಅಂತ ಮನನೊಂದು ಯುವಕನೊಬ್ಬ ಸಾವಿಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ.
ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. ಗಾಂವ್ಕರ ಕೃಷಿ ಕೆಲಸ ಮಾಡಿಕೊಂಡಿದ್ದ. ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಅಂತ ಮನನೊಂದಿದ್ದ. ಈ ಹಿನ್ನೆಲೆಯಲ್ಲಿ ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.