ಮುಸ್ಲಿಂ ಯುವತಿಯನ್ನ ಪ್ರೀತಿಸಿ ಮದ್ವೆಯಾದ ಯುವಕ: ಹಿಂದೂ ಪರ ಸಂಘಟನೆಗಳಿಂದ ತೀವ್ರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಗಲಕೋಟೆ ನಗರದಲ್ಲಿ ನವನಗರ ಠಾಣೆ ಸಿಪಿಐ ರಾಮಣ್ಣ ಬಿರಾದಾರ ವಿರುದ್ಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪ್ರೀತಿಸಿ ಮದುವೆಯಾದ ಕಾರಣಕ್ಕೆ ಪೊಲೀಸರು ಮುಸ್ಲಿಂ ಪರ ನಿಂತಿದ್ದಾರೆ.

ಈ ವೇಳೆ ಪೊಲೀಸರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ, ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ಭೇಟಿ ನೀಡಿದ್ದರು. ಚರಂತಿಮಠ ಎಸ್ಪಿ ಜತೆ ಮಾತುಕತೆ ನಡೆಸಿ ಸಿಪಿಐ ರಾಮಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!