ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಪಾಲಿಕೆಯ ಪಾರ್ಕ್ ಒಂದರಲ್ಲಿ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಮಿತ್ ಬಿಕೋ ಅಲಿಯಾಸ್ ತುಷಾಂತ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ. ನೇಪಾಳ ಮೂಲದ ಮೆಟ್ರೋ ಕಾಮಗಾರಿ ನೋಡಿಕೊಳ್ಳುತ್ತಿದ್ದ ಮಾರ್ಷಲ್ ಒಬ್ಬರ ಮಗನಾಗಿದ್ದ ತುಷಾಂತ್, ಹೋಟೆಲ್‌ವೊಂದರಲ್ಲಿ ಕೆಲಸ ಮಾಡಿಕೊಂಡು ಪೋಷಕರ ಜೊತೆ ವಾಸವಾಗಿದ್ದ. ತುಷಾಂತ್ ಶುಕ್ರವಾರ ಸಂಜೆ ಹೊತ್ತಿಗೆ ಮನೆಯಲ್ಲಿ ಕಿರಿಕ್ ಮಾಡಿಕೊಂಡು ಮನೆಯಿಂದ ಹೊರಹೋಗಿದ್ದ.
ರಾತ್ರಿಯೆಲ್ಲಾ ಮಗ ಮನೆಗೆ ಬಾರದೆಯಿದ್ದ ಕಾರಣ ಪೋಷಕರು ಹುಡುಕಾಟ ನಡೆಸಿದ್ದರು. ಶನಿವಾರ ಬೆಳಗ್ಗೆ ಪಾರ್ಕ್ನಲ್ಲಿ ತುಷಾಂತ್ ನೇಣಿಗೆ ಶರಣಾಗಿರುವ ವಿಚಾರ ಪೋಷಕರಿಗೆ ತಿಳಿದಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಹೆಣ್ಣೂರು ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆತ್ಮಹತ್ಯೆ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.