ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಲ್ಲೊಬ್ಬ ಯುವಕ ಹಾವಿನ ‘ಹುಟ್ಟುಹಬ್ಬ’ ಆಚರಣೆ ಮಾಡಿದ್ದಾನೆ! ವಿಡಿಯೋ ವೈರಲ್ ಆಗುತ್ತಿದ್ಧಂತೆ ಆತ ಜೈಲುಪಾಲಾಗಿದ್ದಾನೆ.
ಮಹಾರಾಷ್ಟ್ರದ ಧುಲೆಯಲ್ಲಿ ಈ ಘಟನೆ ವರದಿಯಾಗಿದೆ. ನಾಗರಹಾವಿನ ಹುಟ್ಟುಹಬ್ಬ ಆಚರಿಸುತ್ತಿದ್ದ ರೀಲ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಯುವಕ ಸಂಕಷ್ಟಕ್ಕೆ ಸಿಲುಕಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆತನನ್ನು ಬಂಧಿಸಿ ಕ್ರಮ ಜರುಗಿಸಿದ್ದಾರೆ.
ಕಳೆದ ತಿಂಗಳು, ನಾಗರ ಪಂಚಮಿಯ ದಿನದಂದು, ವಾಘ್ ಗ್ರಾಮದ ಬಳಿ ನಾಗರಹಾವನ್ನು ಹಿಡಿದು, ಅದನ್ನು ಮನೆಗೆ ತಂದ ಯುವಕ, ಬಳಿಕ ಕೇಕ್ ಕತ್ತರಿಸಿ ಅದರ ಹುಟ್ಟುಹಬ್ಬ ಆಚರಿಸಿದ್ದ. ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವನ್ನು ಅಪ್‌ಲೋಡ್ ಮಾಡಿದ್ದು, ಅದು ಭಾರಿ ವೈರಲ್ ಆಗಿತ್ತು.