ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಿನಿ ಇಂಡಸ್ಟ್ರಿಯ ಹೊಸ ಪ್ರತಿಭೆ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.

ಮೇಡಗು, ರಾಕಥಾನ್ ನಂತಹ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಸೈ ಅನಿಸಿಕೊಂಡಿದ್ದರು ಪ್ರವೀಣ್. ಇವರ ಪ್ರತಿಭೆಗೆ ಕೈ ತುಂಬಾ ಅವಕಾಶಗಳು ಇದ್ದವು. ಆದರೆ, ಆರೋಗ್ಯ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಓಮಂದೂರರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿ ಬೆಳಗ್ಗೆ ಅವರು ಇಹಲೋಕ ತ್ಯಜಿಸಿದ್ದಾರೆ.

ಪ್ರವೀಣ್‌ ಕುಮಾರ್‌ ನಿಧನಕ್ಕೆ ಅಭಿಮಾನಿಗಳು, ಸಿನಿ ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!