ಇಲ್ಲಿ 18-25 ವರ್ಷದ ಒಳಗಿನ ಯುವಜನತೆಗೆ ಇನ್ಮುಂದೆ ಸಿಗಲಿದೆ ಉಚಿತ ಕಾಂಡೋಮ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಜನವರಿ 1 ರಿಂದ 18 ರಿಂದ 25 ವರ್ಷ ವಯಸ್ಸಿನವರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ.
ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಂದಿನ ವರ್ಷದಿಂದ ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಲೈಂಗಿಕವಾಗಿ ಹರಡುವ ರೋಗಗಳ (STD) ಹರಡುವಿಕೆಯನ್ನು ಕಡಿಮೆ ಮಾಡಲು ಮುಂದಿನ ವರ್ಷದಿಂದ ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.
ಫ್ರಾನ್ಸ್‌ನಲ್ಲಿ 2020 ಮತ್ತು 2021 ರಲ್ಲಿ ಎಸ್‌ಟಿಡಿ ಹರಡುವ ಪ್ರಮಾಣ ಶೇ.30 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಅಂದಾಜಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!