ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಪ್ರಾಣ ಕಳೆದುಕೊಂಡ ಯುವಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಇಬ್ಬರು ಯುವಕರು ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ದಾರುಣ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಕೊರಟ್ಟಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಮೃತಪಟ್ಟ ಯುವಕರನ್ನು ಕೊರಟ್ಟಿ ನಿವಾಸಿಗಳಾದ ಕೃಷ್ಣಕುಮಾರ್(17) ಮತ್ತು ಸಂಜಯ್ (16) ಎಂದು ಗುರುತಿಸಲಾಗಿದೆ.

ಇಂದು ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ನಡೆದ ಈ ಘಟನೆ ತಕ್ಷಣ ಗಮನಕ್ಕೆ ಬಂದಿಲ್ಲ. ಬೆಳಗ್ಗೆ 5 ಗಂಟೆಯ ಸುಮಾರಿಗೆ ಯುವಕರ ಶವಗಳು ಪತ್ತೆಯಾದ ನಂತರ ಘಟನೆ ಬೆಳಕಿಗೆ ಬಂದಿದೆ.

ಈ ಯುವಕರು ಚಲಿಸುತ್ತಿದ್ದ ರೈಲಿನಿಂದ ಕೊರಟ್ಟಿ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಮೇಲೆ ಜಿಗಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಯುವಕರಲ್ಲಿ ಒಬ್ಬರ ತಲೆಗೆ ತೀವ್ರ ಪೆಟ್ಟಾಗಿದ್ದು, ಮತ್ತೊಬ್ಬರು ಪ್ಲಾಟ್ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದಾರೆ.

ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!