ತೆಲುಗು ಯುವನಟ ಸುಧೀರ್ ವರ್ಮಾ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ತೆಲುಗು ಯುವನಟ ಸುಧೀರ್ ವರ್ಮಾ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಸುಷ್ಮಿತಾ ನಿರ್ಮಾಣದಲ್ಲಿ ಮೂಡಿ ಬಂದಿದ್ದ ‘ಶೂಟೌಟ್’ (Shootout) ವೆಬ್ ಸಿರೀಸ್ ನಲ್ಲಿ ನಟಿಸಿದ್ದ ಹಾಗೂ ‘ಸೆಕೆಂಡ್ ಹ್ಯಾಂಡ್’ ಸಿನಿಮಾದ ಮೂಲಕ ಗುರುತಿಸಿಕೊಂಡಿದ್ದ ಸುಧೀರ್ ವರ್ಮಾ ವೈಯಕ್ತಿಕ ಕಾರಣಗಳಿಂದಾಗಿ ಇಂದು ತಮ್ಮ ವೈಜಾಗ್ ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಧೀರ್ ನಿಧನದ ಸುದ್ದಿ ಹರಡುತ್ತಿದ್ದಂತೆಯೇ ಅವರ ಮನೆಗೆ ಧಾವಿಸಿರುವ ಅನೇಕ ಕಲಾವಿದರು, ಸುಧೀರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಸಾವಿಗೆ ನಿಖರವಾದ ಕಾರಣ ಗೊತ್ತಾಗದೇ ಇದ್ದರೂ, ವೈಯಕ್ತಿಕ ಕಾರಣಕ್ಕಾಗಿ ಅವರು ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!