ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ಘಟನೆ ನಡೆದಿದೆ.
ಮೃತ ಯುವತಿಯನ್ನು ಮೂಲತಃ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ ಎಂದು ಗುರುತಿಸಲಾಗಿದೆ.
ಭಾನುವಾರ ರಜೆಯ ಹಿನ್ನೆಲೆ ಯುವತಿ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ಈ ವೇಳೆ ಅಲ್ಲಿಯೇ ಸಮೀಪದಲ್ಲಿರುವ ಮೈದಾಳ ಕೆರೆ ಕೋಡಿ ನೋಡಲು ತೆರಳಿದ್ದಳು. ಕೆರೆ ಕೋಡಿ ನೋಡಲು ಹೋದ ಯುವತಿ ಕಾಲು ಜಾರಿ ಬಿದ್ದಿದ್ದಾಳೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.