ಕೆಲಸದ ಒತ್ತಡದಿಂದ ಯುವತಿ ಸಾವು: ಕಾರ್ಮಿಕ ಸಚಿವಾಲಯದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುಣೆಯ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ಕೇಂದ್ರ ಕಾರ್ಮಿ ಮತ್ತು ಉದ್ಯೋಗ ಸಚಿವಾಲಯದಿಂದ ವಿವರ ಕೇಳಿದೆ.

ಅರ್ನ್ಸ್ಟ್ & ಯಂಗ್ (EY) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷ ವಯಸ್ಸಿನ ಉದ್ಯೋಗಿ ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಕಳೆದ ಜುಲೈ 26ರಂದು ಸಾವನ್ನಪ್ಪಿದ್ದರು. ಸಾವಿನ ಬಳಿಕ ಕೆಲಸದ ಒತ್ತಡದಿಂದ ನಮ್ಮ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಾನವ ಹಕ್ಕುಗಳ ಆಯೋಗವು ಪ್ರಸ್ತುತ ನಡೆಯುತ್ತಿರುವ ತನಿಖೆಯನ್ನು ಒಳಗೊಂಡಂತೆ ಪ್ರಕರಣದ ಸಮಗ್ರ ವರದಿ ನೀಡುವಂತೆ ಕೋರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಕಾರ್ಮಿಕ ಸಚಿವಾಲಯವು ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

ಮಾನವ ಹಕ್ಕುಗಳ ಆಯೋಗ
ಎನ್‌ಎಚ್‌ಆರ್‌ಸಿ ಪ್ರಕಾರ, ಪೆರಾಯಿಲ್ ಅವರ ಸಾವು ಕಳವಳಕಾರಿಯಾಗಿದೆ. ಕಾರ್ಪೋರೇಟ್‌ ಕೆಲಸದ ಸಂಸ್ಕೃತಿಯು ಮಾನಸಿಕ ಮತ್ತು ದೈಹಿಕವಾಗು ಉಂಟು ಮಾಡುವ ಹಾನಿಯ ಬಗ್ಗೆ ಆತಂಕಕಾರಿ ಭಾವನೆ ಮೂಡಿಸುತ್ತದೆ. ಇಂತಹ ಬೆಳವಣಿಗೆಗಳಿಂದ ನಿದ್ರಾಹೀನತೆ ಸೇರಿದಂತೆ ಕಾಯಿಲೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಅಲ್ಲದೇ ಕಾರ್ಪೋರೇಟ್‌ ಸಂಸ್ಥೆಗಳು ಅಸಾಧ್ಯ ಗುರಿಗಳತ್ತ ನಿರಂತರ ಅನ್ವೇಷಣೆಯೇ ಇದಕ್ಕೆ ಕಾರಣವಾಗಿದ್ದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಗಳಿಗೆ ಕಾರಣವಾಗಿದೆ ಎಂದು ಹೇಳಿದೆ.

ಈ ಘಟನೆ ಬೆನ್ನಲ್ಲೇ ಮಾನವ ಹಕ್ಕುಗಳ ಆಯೋಗವು, ಕಾರ್ಪೋರೇಟ್‌ ಸಂಸ್ಥೆಗಳಲ್ಲಿ ಕಾರ್ಯಸ್ಥಳದ ಸುರಕ್ಷತೆ ಕಾಯ್ದುಕೊಳ್ಳು ವಿಶೇಷ ತಂಡವೊಂದನ್ನ ರಚಿಸಿದೆ. ಇದು ಕಾರ್ಮಿಕ ಶಾಸನಗಳು ಹಾಗೂ ನಿಬಂಧನೆಗಳನ್ನು ಪರಿಶೀಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಶಿಫಾರಸು ಮಾಡಲಿದೆ. ಖಾಸಗಿ ವಲಯದ ಉದ್ಯೋಗಿಗಳಿಗೆ ಕೆಲಸ ಸಮಯ, ಸುರಕ್ಷತಾ ಕ್ರಮಗಳ ಕುರಿತು ವಿಶೇಷ ಮಾನದಂಡಗಳನ್ನು ರೂಪಿಸಲು ಶಿಫಾರಸು ಮಾಡಲಿದೆ ಎಂದು ಎನ್‌ಹೆಚ್‌ಆರ್‌ಸಿ ಹೇಳಿದೆ.

 

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!