ಕೆಲಸದ ಒತ್ತಡದಿಂದ ಯುವತಿ ಸಾವು: ಅಧಿಕಾರಿಗಳಿಂದ ವರದಿ ಕೇಳಿದ ಕೇಂದ್ರ ಕಾರ್ಮಿಕ ಸಚಿವ ಮಾಂಡವಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೆಲಸದ ಒತ್ತಡದಿಂದ ಇವೈ ಉದ್ಯೋಗಿ ಅನ್ನಾ ಸೆಬಾಸ್ಟಿಯನ್ ಪೆರಾಯಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ 7 ರಿಂದ 10 ದಿನಗಳಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಸೋಮವಾರ ಹೇಳಿದ್ದಾರೆ.

ಉದ್ಯೋಗಿ ಸಾವಿಗೆ ಸಂಬಂಧಿಸಿದ ಅಸುರಕ್ಷಿತ ಮತ್ತು ಶೋಷಣೆಯ ಕೆಲಸದ ವಾತಾವರಣದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಮುಂದಿನ 7 ರಿಂದ 10 ದಿನಗಳಲ್ಲಿ ವರದಿ ಸಲ್ಲಿಕೆಯಾಗುವ ನಿರೀಕ್ಷೆ ಇದ್ದು, ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ನಾವು ಈಗಾಗಲೇ ರಾಜ್ಯದ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದೇವೆ, ವರದಿಯನ್ನು ಪರಿಶೀಲಿಸಿದ ನಂತರವೇ ಹೆಚ್ಚಿನ ವಿವರಗಳನ್ನು ನೀಡುತ್ತೇವೆಎಂದು ಹೇಳಿದರು.

ಕೆಲ ದಿನಗಳ ಹಿಂದೆ ಇವೈ ಕಂಪನಿ ಉದ್ಯೋಗಿ, 26 ವರ್ಷದ ಲೆಕ್ಕಪರಿಶೋಧಕಿ ಅನ್ನಾ ಸೆಬಾಸ್ಟಿಯನ್ ಪೆರಾಯಿ ಅವರು ಒತ್ತಡದ ಕಾರಣಕ್ಕೆ ಸಾವಿಗೀಡಾಗಿದ್ದರು. ಈ ಬಗ್ಗೆ ಅವರ ತಾಯಿ ಕಂಪನಿ ಸಿಇಒಗೆ ಪತ್ರ ಬರೆದ ನಂತರ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!