ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲಸಕ್ಕೆ ಹೋಗುತ್ತಿದ್ದ ಯುವತಿ ಅಪಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಂಡ್ಯದ ತರೀಕೆರೆ ಮೂಲದ ಸುಮಾ (25) ಮೃತ ದುರ್ದೈವಿ. ಹೆಬ್ಬಾಳದ ಬ್ಯಾಂಕ್ ಒಂದರಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ಡ್ಯೂಟಿಗೆ ಹೋಗಲು ಬಂದಿದ್ದ ವೇಳೆ ಅಪಘಾತ ಸಂಭವಿಸಿದೆ.
ಕೆಲಸದ ಹಿನ್ನೆಲೆ ಕಳೆದ ಮೂರು ವರ್ಷದಿಂದ ಬೆಂಗಳೂರಿನಲ್ಲಿ ಸುಮಾ ವಾಸವಾಗಿದ್ದರು. ಬೆಳಗ್ಗೆ ಕೆಲಸಕ್ಕೆ ಹೋಗಲು ಬಂದಾಗ ದುರಂತ ಸಂಭವಿಸಿದೆ. ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಮೃತದೇಹ ಇರಿಸಲಾಗಿದೆ. ಸಣ್ಣ ವಯಸ್ಸಿಗೆ ಮಗಳನ್ನು ಕಳೆದುಕೊಂಡ ಪೋಷಕರು ಕಂಗಾಲಾಗಿದ್ದಾರೆ.