540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ, ರಕ್ಷಣಾ ಕಾರ್ಯ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಗುಜರಾತ್​ನ ಕಛ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬಳು 540 ಅಡಿ ಆಳದ ಬೋರ್​ವೆಲ್​ಗೆ ಬಿದ್ದಿರುವ ಘಟನೆ ನಡೆದಿದೆ.

ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಗಡಿ ಭದ್ರತಾ ಪಡೆ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ತಂಡ ಬಾಲಕಿಯ ಮೇಲೆ ನಿಗಾ ಇರಿಸಿದ್ದು, ಆಕೆಗೆ ಆಮ್ಲಜನಕ ಒದಗಿಸಿದೆ.

540 ಅಡಿ ಆಳದ ಕೊಳವೆಬಾವಿಯಲ್ಲಿ ಬಾಲಕಿ 490 ಅಡಿ ಆಳದಲ್ಲಿ ಸಿಲುಕಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭುಜ್ ತಾಲೂಕಿನ ಕಂಡೆರೈ ಗ್ರಾಮದಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ.

ಅಧಿಕಾರಿಗಳ ಪ್ರಕಾರ, ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ರಕ್ಷಣಾ ತಂಡವು ಆಕೆಗೆ ಸರಿಯಾದ ಆಮ್ಲಜನಕ ಪೂರೈಕೆಯನ್ನು ಮಾಡುತ್ತಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!