ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ತಲೆಗೆ ಪೆಟ್ಟಾದ ಪರಿಣಾಮ ಯುವತಿಯೊಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ಜಿಲ್ಲೆಯ ಮಡ್ಡಿಪೇಟೆಯಲ್ಲಿ ನಡೆದಿದೆ. ಯುವತಿಯನ್ನು 20 ವರ್ಷದ ಮಹಾದೇವಿ ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಯುವತಿ ದೇವಾಲಯಕ್ಕೆ ಹೊರಟಿದ್ದ ವೇಳೆ ನಾಯಿ ದಾಳಿ ನಡೆಸಿದೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ.
ತಲೆಗೆ ಪೆಟ್ಟು ಬಿದ್ದಿದ್ದರಿಂದ ರಕ್ತಹೆಪ್ಪುಗಟ್ಟಿದ್ದು, ಯುವತಿ ಕೋಮಾ ಸ್ಥಿತಿಗೆ ಹೋಗಿದ್ದಾಳೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಬಡ ಕುಟುಂಬ ದಿಕ್ಕು ಕಾಣದಂತಾಗಿದೆ.