ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರವೆಸಗಿದ್ದು, ಇನ್ನಿಬ್ಬರು ಕೃತ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸಂತ್ರಸ್ತೆಯ 22 ವರ್ಷದ ಸ್ನೇಹಿತ ಮತ್ತು ಕೃತ್ಯವನ್ನು ಚಿತ್ರೀಕರಿಸಿದ ಆಕೆಯ ಗೆಳತಿ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಭಿವಂಡಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, 2024ರ ಡಿಸೆಂಬರ್ 29 ರಂದು ಭಿವಂಡಿಯ ಕಾಮತ್ಘರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಸಂತ್ರಸ್ತೆಯ ಸ್ನೇಹಿತ ತನ್ನೊಂದಿಗೆ ಮಧ್ಯಾಹ್ನ ವಾಕಿಂಗ್‌ಗೆ ಬರುವಂತೆ ಆಕೆಯನ್ನು ಕರೆದುಕೊಂಡು ಹೋಗಿದ್ದಾನೆ. ನಂತರ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದಿದ್ದಾನೆ ಮತ್ತು ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಧಿಕಾರಿ ಹೇಳಿದರು.
ಇನ್ನಿಬ್ಬರು ಆರೋಪಿಗಳು ಈ ಕೃತ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ವಿಡಿಯೋ ವೈರಲ್ ಆದ ನಂತರ ಯುವತಿ ಕೃತ್ಯ ನಡೆದ ಒಂದು ತಿಂಗಳ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.