ಆರ್​ಸಿಬಿ ಕಪ್ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ ಎಂದ ಯುವತಿ…ಪೋಸ್ಟರ್ ಸಖತ್ ವೈರಲ್!

ಹೊಸದಿಗಂತ ಡಿಜಟಲ್‌ ಡೆಸ್ಕ್

ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಮಂಗಳವಾರ 23 ರನ್​ಗಳಿಂದ ಗೆಲುವು ಸಾಧಿಸಿದ್ದು, ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಚೆನ್ನೈ ಖಾತೆ ತೆರೆದಿದೆ.
ಇನ್ನು ಪಂದ್ಯದ ವೇಳೆ ಒಂದು ಇಂಟ್ರೆಸ್ಟಿಂಗ್ ಸಂಗತಿ ನಡೆದಿದ್ದು, ಅದೇನೆಂದರೆ ಮ್ಯಾಚ್​ ನೋಡಲು ಬಂದಿದ್ದ ಯುವತಿಯೊಬ್ಬಳು ಹಿಡಿದಿದ್ದ ಪೋಸ್ಟರ್ .
ಹೌದು, ಬೆಂಗಳೂರು- ಚೆನ್ನೈ ಸೂಪರ್ ಕಿಂಗ್ಸ್ ಮ್ಯಾಚ್​ ನೋಡಲುಬಂದಿದ್ದ ಯುವತಿಯೊಬ್ಬಳು ಪೋಸ್ಟರ್ ಒಂದು ಹಿಡಿದ್ದು, ಅದರಲ್ಲಿ ತನ್ನ ನೆಚ್ಚಿನ ತಂಡ ಟ್ರೋಫಿ ಗೆಲ್ಲುವವರೆಗೂ ಮದುವೆಯಾಗುವುದಿಲ್ಲ ಎಂದು ಬರೆದಿದ್ದು, ಸಖತ್ ವೈರಲ್ ಆಗಿದೆ.

ಈ ರೀತಿ ಪೋಸ್ಟರ್ ಹಿಡಿದು ತನ್ನ ತಂಡದ ಮೇಲಿರುವ ಅಭಿಮಾನವನ್ನು ವ್ಯಕ್ತಪಡಿಸಿದ ಯುವತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಭಿಮಾನಿಯಾಗಿದ್ದು, ಈ ಫೋಟೋ ಈಗಾಗಲೇ ಅಂತರ್ಜಾಲದಲ್ಲಿ ಎಲ್ಲರ ಗಮನ ಸೆಳೆದಿದೆ.
ಮಂಗಳವಾರ ಸಂಜೆ ನವಿ ಮುಂಬೈನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವಿನ ಪಂದ್ಯದ ವೇಳೆ ಈ ದೃಶ್ಯ ಕಂಡುಬಂದಿದೆ. ‘ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ’ ಎಂಬ ಪೋಸ್ಟರ್ ಹಿಡಿದು ಮಹಿಳೆ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಈಗ ಸೋಶೀಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಜೊತೆಗೆ ಯುವತಿಯ ಈ ಪೋಸ್ಟರ್​ಗೆ ಅನೇಕ ನೆಟ್ಟಿಗರು ವ್ಯಂಗ್ಯವಾಗಿ ಟ್ವೀಟ್ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!