Thursday, September 21, 2023

Latest Posts

ಪುತ್ತೂರಿನಲ್ಲಿ ಇರಿತಕ್ಕೊಳಗಾದ ಯುವತಿ ಸಾವು: ಆರೋಪಿ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೈಕ್​ನಲ್ಲಿ ಬಂದ ಯುವಕನೋರ್ವ ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ಗುರುವಾರ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗೌರಿ (18) ಕೊಲೆಗೀಡಾದ ಯುವತಿ. ಕೃತ್ಯ ಎಸಗಿದ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದು, ಈತನನ್ನು ಪದ್ಮರಾಜ್​ ಎಂದು ಗುರುತಿಸಲಾಗಿದೆ.

ಗೌರಿ ಪುತ್ತೂರಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿ ಪದ್ಮರಾಜ್​ ಮತ್ತು ಗೌರಿ ಪರಿಚಯದವರಾಗಿದ್ದರು. ಅಲ್ಲದೇ ಈ ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಈ ಸಂಬಂಧ ವಿಟ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಇಂದು ಪುತ್ತೂರು ಬಸ್ ನಿಲ್ದಾಣದಲ್ಲಿ ಇಬ್ಬರ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿದ್ದು, ಇದರಿಂದ ಕೋಪಗೊಂಡ ಪದ್ಮರಾಜ್​ ಮಹಿಳಾ ಪೊಲೀಸ್ ಠಾಣೆ ಬಳಿ ಹೋಗುತ್ತಿದ್ದ ಗೌರಿಗೆ ಬೈಕ್​ನಲ್ಲಿ ಬಂದು ಕುತ್ತಿಗೆಗೆ ಚೂರಿಯಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ಗೌರಿಯನ್ನು ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾಳೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿ ಪದ್ಮರಾಜ್​ನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!