ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಾವಂಜೆಯಲ್ಲಿ ಸಂಬಂಧಿಕರ ಮದುವೆಯ ಹಿಂದಿನ ದಿನ ನಡೆಯುವ (ರೋಸ್) ಕಾರ್ಯಕ್ರಮಕ್ಕೆ ತೆರಳಿದ್ದ ಯುವತಿಯೋರ್ವಳು
ಬುಧವಾರ ರಾತ್ರಿ ಕುಸಿದು ಬಿದ್ದು ಅಸ್ಥಸ್ಥಗೊಂಡಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಮೃತ ದುರ್ಧೈವಿ.
ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಯುವತಿಯೂ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ.