ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಚ್ಚಿಲದ ಖಾಸಗಿ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರೆಸಾರ್ಟ್ ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ.
ರೆಸಾರ್ಟ್‌ನಲ್ಲಿ ನಿಯಮ ಪಾಲನೆ ಮಾಡದಿರುವುದೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ತನಿಖೆ ಮುಗಿಯುವವರೆಗೆ ರೆಸಾರ್ಟ್‌ನ್ನು ಸೀಲ್‌ಡೌನ್ ಮಾಡಿದ್ದಾರೆ.
ಖಾಸಗಿ ರೆಸಾರ್ಟ್‌ನಲ್ಲಿ ಮೂವರು ಯುವತಿಯರು ಪೂಲ್‌ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಐದಾರು ನಿಮಿಷದಲ್ಲಿ ಸ್ವಿಮ್ಮಿಂಗ್ ಬಾರದ ಯುವತಿಯರು ನೀರಿನಲ್ಲಿ ಇಳಿದು ಉಸಿರಾಡಲಾಗದೇ,ನೀರು ತುಂಬಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ವಿಮಿಂಗ್‌ಪೂಲ್‌ಗೆ ಇಳಿದಿದ್ದಾರೆ. ಈಜು ಬಾರದಿದ್ದರೂ ಮೊದಲಿಗೆ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡು, ಕೈಕೈ ಹಿಡಿದು ಆಟವಾಡುತ್ತಾ ಮುಂದೆ ಹೋಗಿದ್ದಾರೆ. ಅದರಲ್ಲಿ ಓರ್ವ ಯುವತಿ ಸ್ವಿಮಿಂಗ್‌ಪೂಲ್‌ನಲ್ಲಿದ್ದ ಟ್ಯೂಬ್ ಎತ್ತಿಕೊಳ್ಳಲು ಯತ್ನಿಸಿದ್ದಾಳೆ. ಆದರೆ, ಈಜುಕೊಳ ಆಳ ಇದ್ದ ಕಾರಣ ಮುಳುಗಲು ಯತ್ನಿಸಿದ್ದಾಳೆ. ಆಕೆಯನ್ನು ಮತ್ತೋರ್ವ ಯುವತಿ ರಕ್ಷಿಸಲು ಮುಂದಾಗಿದ್ದಾಳೆ. ಈ ವೇಳೆ, ಇಬ್ಬರೂ ನೀರಿನಲ್ಲಿ ಮುಳುಗಿ ಒದ್ದಾಡಿದ್ದಾರೆ.