ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಷಯದ ಕುರಿತು ಸುದೀರ್ಘ ಸಂದೇಶವನ್ನು ಪೋಸ್ಟ್ ಮಾಡಿದರು ಮತ್ತು ಪ್ರಶ್ನೆಗಳ ಸುರಿಮಳೆಗೈದರು.
ಒಂದೂವರೆ ವರ್ಷದಿಂದ ಸರ್ಕಾರಕ್ಕೆ ನಿಮ್ಮ ಕೊಡುಗೆ ಏನೂ ಇಲ್ಲ, ಅಭಿವೃದ್ಧಿ ವಿಚಾರದಲ್ಲಿ ಶೂನ್ಯ, ಒಂದರ ಹಿಂದೆ ಒಂದರಂತೆ ಭ್ರಷ್ಟಾಚಾರ, ಸಾಮಾಜಿಕ ಶೋಷಣೆ, ಅಸಂಖ್ಯಾತ ಮಹಿಳೆಯರ ಮೇಲೆ ದೌರ್ಜನ್ಯಗಳು ಹತ್ತು ಹಲವು ಎಂದು ವಿಜಯೇಂದ್ರ ಟೀಕಿಸಿದ್ದಾರೆ.
ಅಹಿಂದ ಹೆಸರೇಳಿಕೊಂಡು ಅಹಿಂದ ಅಹಿಂದ ಎಂದು ಹೇಳುವ ನೀವು ಭಾರತದ ವರ್ಗಕ್ಕೆ ಏನು ಪ್ರಯೋಜನ ತಂದಿದ್ದೀರಿ? ನೀವು ಅಧಿಕಾರ ವಹಿಸಿಕೊಂಡ ನಂತರ ಎಷ್ಟು ಸಬ್ಸಿಡಿ ನೀಡಿದ್ದೀರಿ ಎಂಬುದನ್ನು ತೋರಿಸುವ ದಾಖಲೆಗಳನ್ನು ಬಿಡುಗಡೆ ಮಾಡಿ. ಶೋಷಿತ ವರ್ಗಗಳಿಗೆ ಅನುದಾನ ಬಿಡುಗಡೆ ಮಾಡುವ ಮಾತು ಹಾಗಿರಲಿ, ವಿಶ್ವಕವಿ ಎಂದು ಮಾನ್ಯತೆ ಪಡೆದ ಪೂಜ್ಯ ವಾಲ್ಮೀಕಿ ಅವರ ಹೆಸರಿರುವ ನಿಗಮದಲ್ಲಿ ಪರಿಶಿಷ್ಟ ಪಂಗಡದ, ಆದಿವಾಸಿ ಜನರ ಕಲ್ಯಾಣದ ಕಾರ್ಯಗಳಿಗೆ ಮೀಸಲಾಗಿ ಠೇವಣಿ ಇರಿಸಿದ್ದ ಬ್ಯಾಂಕ್ ಖಾತೆಗೆ ನಿಮ್ಮ ಸಚಿವರ ಮೂಲಕ ಕನ್ನ ಹಾಕಿಸಿದವರು ನೀವಲ್ಲ ಎಂಬುದನ್ನು ನೀವು ಸಾಬೀತು ಮಾಡಲು ಸಾಧ್ಯವೇ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.