ನಿಮ್ಮ ಅಜ್ಜಿ ಇಂದಿರಾ ಗಾಂಧಿ ನಮ್ಮನ್ನು ಒಂದೂವರೆ ವರ್ಷ ಜೈಲಿಗಟ್ಟಿದ್ದರು: ರಾಹುಲ್ ಗಾಂಧಿ ವಿರುದ್ಧ ಕೇರಳ ಸಿಎಂ ಪಿಣರಾಯಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿಪಕ್ಷಗಳು ಒಗ್ಗಟ್ಟಾಗಿ ಹೋರಾಡುತ್ತಿದ್ದು, ಇದರ ನಡುವೆ ಕೇರಳದಲ್ಲಿ ಕಾಂಗ್ರೆಸ್ ವಿರುದ್ದ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸುತ್ತಿದ್ದಾರೆ.

ಇತ್ತೀಚೆಗೆ ಪಿಣರಾಯಿ ವಿಜಯನ್ ಅವರನ್ನು ಪ್ರಶ್ನಿಸಿದ್ದ ರಾಹುಲ್ ಗಾಂಧಿಗೆ ಕೇರಳ ಸಿಎಂ ತಿರುಗೇಟು ನೀಡಿದ್ದು ನಿಮ್ಮ ಅಜ್ಜಿ ಇಂದಿರಾ ಗಾಂಧಿ ನಮ್ಮನ್ನು ಒಂದೂವರೆ ವರ್ಷ ಜೈಲಿಗಟ್ಟಿದ್ದರು. ಇಡೀ ದೇಶವನ್ನೇ ಕತ್ತಲಲ್ಲಿ ಇಟ್ಟಿದ್ದರು ಎಂದು ತುರ್ತು ಪರಿಸ್ಥಿತಿಯನ್ನು ನೆನಪಿಸಿಸುತ್ತಾ ವಾಗ್ದಾಳಿ ನಡೆಸಿದ್ದಾರೆ.

ಕೆಲವು ದಿನಗಳ ಹಿಂದೆ ದೇಶದಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿ ಮೋದಿ, ಬಿಜೆಪಿಯನ್ನು ಪ್ರಶ್ನಿಸುತ್ತಿದೆ. ಹೀಗೆ ಪ್ರಶ್ನಿಸಿದ ಮುಖ್ಯಮಂತ್ರಿಗಳು ಜೈಲು ಸೇರುತ್ತಿದ್ದಾರೆ. ಆದರೆ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಕೇಂದ್ರ ಸರ್ಕಾರ ಕೂಡ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇತ್ತ ಪಿಣರಾಯಿ ವಿಜಯನ್ ಕೂಡ ಮೋದಿಯನ್ನು ಪ್ರಶ್ನಿಸುತ್ತಿಲ್ಲ. ಕಾರಣ ಪಿಣರಾಯಿ ಪುತ್ರಿಯ ಹಗರಣ, ಚಿನ್ನದ ಹಗರಣಗಳು ಎಲ್ಲಿ ಕುಣಿಕೆಯಾಗುತ್ತೋ ಅನ್ನೋ ಭಯ ಪಿಣರಾಯಿ ವಿಜಯನ್‌ಗೆ ಇದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ರಾಹುಲ್ ಗಾಂಧಿ ಮಾಡಿದ ಆರೋಪಕ್ಕೆ ಇದೀಗ ಪಿಣರಾಯಿ ವಿಜಯನ್ ಕೋಝಿಕೋಡ್‌ನಲ್ಲಿ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿಗೆ ಕೇರಳ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಬಿಜೆಪಿ ಕ್ರಮ ಕೈಗೊಂಡಿಲ್ಲ ಯಾಕೆ ಅನ್ನೋ ಕುರಿತು ಚಿಂತೆಯಾಗಿದೆ. ಆದರೆ ನಾನಿನಲ್ಲಿ ರಾಹುಲ್ ಗಾಂಧಿಗೆ ನೆನಪಿಸಲು ಬಯಸುತ್ತಿರುವುದು ನಿಮ್ಮ ಅಜ್ಜಿ ಇಂದಿರಾ ಗಾಂಧಿ ನಮ್ಮನ್ನು ಒಂದೂವರೆ ವರ್ಷ ಜೈಲಿಗಟ್ಟಿದ್ದರು. ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿ ವೇಳೆ ಇಡೀ ದೇಶವನ್ನೇ ಕತ್ತಲಲ್ಲಿ ಇಟ್ಟಿದ್ದರು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!