ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಾಕೇಶ್ ಕಾಂತಾರ ಚಾಪ್ಟರ್ 1ರಲ್ಲಿ ಪಾತ್ರವೊಂದನ್ನು ಮಾಡಿದ್ದರು. ರಿಷಭ್ ಶೆಟ್ಟಿ ರಾಕೇಶ್ ಬಗ್ಗೆ ಭಾವನಾತ್ಮಕ ಪೋಸ್ಟ್ ಒಂದನ್ನು ಮಾಡಿದ್ದಾರೆ.
ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ‘ಕಾಂತಾರ’ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗೂ ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ. ಮತ್ತೆ ಹುಟ್ಟಿ ಬಾ ಗೆಳೆಯ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ ಎಂದು ರಾಕೇಶ್ ಬಗ್ಗೆ ರಿಷಬ್ ಶೆಟ್ಟಿ ಪೋಸ್ಟ್ ಹಂಚಿಕೊಂಡಿದ್ದಾರೆ.