ಸಿಎಂ ವಿರುದ್ದ ಅವಹೇಳನಕಾರಿ ಪೋಸ್ಟ್: ಯುವಕ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಟಿ. ನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಟಿ. ನರಸೀಪುರ ತಾಲೂಕು ತಲಕಾಡು ಹೋಬಳಿ ಮಾವಿನಹಳ್ಳಿ ಗ್ರಾಮದ ಬಸವಣ್ಣ ಅವರ ಪುತ್ರ ರಂಜನೀಶ್(28) ಬಂಧಿತ ಯುವಕ.

ಟಿ ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ವೇಣುಗೋಪಾಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯನ್ನು ಖಂಡಿಸಿ ಯುವಕ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪೋಸ್ಟ್‌ ಹಾಕಿದ್ದ.
ಆತನ ವಿರುದ್ಧ ಮೆಲ್ಲಹಳ್ಳಿ ರವಿ ಎಂಬುವರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಂಜನೀಶ್ ನನ್ನು ಅರೆಸ್ಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!