ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಕಿಡಿಗೇಡಿಗಳು ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾರ್ಚ್ 14ರ ಸಂಜೆ ನಗರತ್​ಪೇಟೆಯ ಮೊಬೈಲ್ ಫೋನ್ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಇನ್ನು ಈ ಘಟನೆಯಲ್ಲಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುಖೇಶ್ ಎಂಬ ಯುವಕನಿಗೆ ಗಾಯಗಳಾಗಿದ್ದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ​ದೂರು ದಾಖಲಿಸಿದ್ದಾರೆ.

ಐದು ಜನರ ಗುಪೊಂದು ದಾಳಿ ನಡೆಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವಕನ ದೂರಿನ ಆಧಾರದ ಮೇಲೆ ಹಲ್ಲೆ ನಡೆಸಿದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಐಪಿಸಿ ಸೆಕ್ಷನ್ 506, 504, 149, 307, 323 ಮತ್ತು 324 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು. ಈ ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!