ಹೊಸದಿಗಂತ ವರದಿ, ಮಂಗಳೂರು:
ಅಪಾರ್ಟ್ಮೆಂಟ್ ಒಂದರ 14ನೇ ಮಹಡಿಯಿಂದ ಜಿಗಿದು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ನಗರದ ಬ್ರಹ್ಮಗಿರಿ ಎಂಬಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಲೇಕ್ ರಾಜ್ (29) ಎಂದು ತಿಳಿದುಬಂದಿದೆ.
ಉಡುಪಿಯ ಬ್ರಹ್ಮಗಿರಿಬಳಿ ಇರುವ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್ ನಲ್ಲಿ ದುರಂತ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣೆ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.