July 31, 2026
Friday, July 31, 2026
spot_img

ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಶರ್ಟ್‌ಲೆಸ್ ಪ್ರತಿಭಟನೆ: ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗೆ ದೆಹಲಿ ನಡೆದ ಭಾರತ ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ ಮಾಡಿದ ಪ್ರಕರಣದಲ್ಲಿ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಉದಯ್‌ ಭಾನು ಚಿಬ್‌ ಅವರನ್ನು ಬಂಧಿಸಲಾಗಿದೆ.

ಎಐ ಸಭೆಯಲ್ಲಿ ಶರ್ಟ್‌ಲೆಸ್ ಪ್ರತಿಭಟನೆಗೆ ಸಂಬಂಧಿಸಿದಂತೆ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಸುಮಾರು 15 ಗಂಟೆಗಳ ವಿಚಾರಣೆಯ ನಂತರ ಚಿಬ್ ಅವರನ್ನು ಬಂಧಿಸಲಾಗಿದೆ.

ವಿಚಾರಣೆಯ ಸಮಯದಲ್ಲಿ ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರು. ಅವರ ವಿರುದ್ಧ ಸಾಕಷ್ಟು ಪುರಾವೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಬ್‌ನನ್ನು ಈಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಈ ಪ್ರಕರಣದಲ್ಲಿ ಇದು ಎಂಟನೇ ಬಂಧನವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !