Thursday, June 1, 2023

Latest Posts

ಲೈಂಗಿಕ ಕಿರುಕುಳ ಪ್ರಕರಣ: ಯೂತ್‌ ಕಾಂಗ್ರೆಸ್‌ ಮುಖ್ಯಸ್ಥ ಬಿವಿ ಶ್ರೀನಿವಾಸ್‌ಗೆ ಸುಪ್ರೀಂ ನಿಂದ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರಿಗೆ ಸುಪ್ರೀಂಕೋರ್ಟ್ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರನ್ನು ನಿಂದಿಸಿ, ಕಿರುಕುಳ ನೀಡಿದ ಆರೋಪದಲ್ಲಿ ಶ್ರೀನಿವಾಸ್ ಅನ್ನು ಏಪ್ರಿಲ್ 22 ರಂದು ಅರೆಸ್ಟ್‌ ಮಾಡಲಾಗಿತ್ತು.

ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಂಜಯ್ ಕರೋಲ್ ಅವರ ವಿಭಾಗೀಯ ಪೀಠವು ರಾಯಪುರದಲ್ಲಿ 2023ರ ಫೆಬ್ರವರಿ 24ರಂದು ಅಸ್ಸಾಂನಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳದ ಪ್ರಕರಣವನ್ನು ವಿಚಾರಣೆ ನಡೆಸಿದೆ. ಅಲ್ಲದೆ ದೂರು ಸಲ್ಲಿಸುವ ಮೊದಲು ದೂರುದಾರರು ತಮ್ಮ ಟ್ವೀಟ್‌ಗಳಲ್ಲಿ ಮತ್ತು ಮಾಧ್ಯಮ ಸಂದರ್ಶನಗಳಲ್ಲಿ ಆರೋಪಿಸಿದ್ದನ್ನು ಗಮನಿಸಿದ್ದು ಇನ್ನು ಎಫ್‌ಐಆರ್ ದಾಖಲಿಸುವಲ್ಲಿ ಸುಮಾರು ಎರಡು ತಿಂಗಳ ವಿಳಂಬವನ್ನು ಪರಿಗಣಿಸಿ, ಅರ್ಜಿದಾರರು ಮಧ್ಯಂತರ ರಕ್ಷಣೆಗೆ ಅರ್ಹರಾಗಿರುತ್ತಾರೆ. ಬಂಧನದ ಸಂದರ್ಭದಲ್ಲಿ ಅರ್ಜಿದಾರರನ್ನು ರೂ. 50,000/- ನಿರೀಕ್ಷಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಾವು ನಿರ್ದೇಶಿಸುತ್ತೇವೆ ಎಂದು ಹೇಳಿದ್ದಾರೆ.

ಮೇ 22ರಂದು ತನಿಖಾಧಿಕಾರಿಯ ಮುಂದೆ ಮತ್ತು ಅಧಿಕಾರಿಯ ನಿರ್ದೇಶನದಂತೆ ನಂತರದ ದಿನಾಂಕಗಳಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ತನಿಖೆಗೆ ಸಹಕರಿಸುವಂತೆ ಪೀಠವು ಶ್ರೀನಿವಾಸ್ ಗೆ ತಿಳಿಸಿದೆ. ಈ ಪ್ರಕರಣ ಸಂಬಂಧ 2023ರ ಜುಲೈನಲ್ಲಿ ವಿಚಾರಣೆ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!