ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಗೆ ಸಂಕಷ್ಟ: ಎಸ್‌ಐಟಿ ನೊಟೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಹುಕೋಟಿ ಬಿಟ್ ಕಾಯಿನ್ ಪ್ರಕರಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್​ಗೆ ಬಂಧನ ಭೀತಿ ಎದುರಾಗಿದೆ.

ಹ್ಯಾಕರ್ ಶ್ರೀಕಿ ಜೊತೆ ನಲಪಾಡ್​ಗೆ ಸಂಪರ್ಕ ಇದೆ ಹಾಗೂ ವ್ಯವಹಾರಿಕ ನಂಟು ಇತ್ತು ಎಂದು ತನಿಖೆಯಲ್ಲಿ ಬಯಲಾಗಿದ್ದು, ಆರೋಪ ಹಿನ್ನೆಲೆಯಲ್ಲಿ ನಾಳೆ ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ಸೆಕ್ಷನ್ 41ರಡಿ ವಿಶೇಷ ತನಿಖಾ ತಂಡ ನೋಟಿಸ್ ನೀಡಿದೆ.

ಕೆಲವು ತಿಂಗಳ ಹಿಂದೆ ಕೂಡ SIT ಅಧಿಕಾರಿಗಳು ನಲಪಾಡ್ ಅವರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದಿದ್ದರು. ಹ್ಯಾಕರ್ ಶ್ರೀಕಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವ್ಯವಹಾರಿಕವಾಗಿ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ SIT ಅಧಿಕಾರಿಗಳು ತನಿಖೆ ನಡೆಸಿದ್ದರು.

ಪ್ರಮುಖ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತನಾಗಿದ್ದ ಎನ್ನುವ ಕಾರಣಕ್ಕೆ ಬೆಂಗಳೂರಿನ ಕಾಟನ್​ಪೇಟೆ ಹ್ಯಾಕಿಂಗ್ ಕೇಸ್​ನಲ್ಲಿ ಶ್ರೀಕಿ ಜೊತೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ವಿಚಾರಣೆ ನಡೆಸಲಾಗಿತ್ತು. ಇದೀಗ ನಲಪಾಡ್ ಆರೋಪಿ ಎಂದು ಎಸ್‌ಐಟಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!