ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ. ದೇಶದ ಹಿತಕ್ಕಾಗಿ ಇಂತಹ ಪ್ರೊಟೆಸ್ಟ್ಗಳು ಆಗುತ್ತವೆ ಎಂದು ಹೇಳಿದ್ದಾರೆ.
ಯೂತ್ ಕಾಂಗ್ರೆಸ್ ಮುಖಂಡರ ಬಂಧನವನ್ನು ಖಂಡಿಸಿ ಮಾತನಾಡಿದ ಅವರು, ಎಂದಿರುವ ಖರ್ಗೆ, ಕಾಮನ್ ವೆಲ್ತ್ ಗೇಮ್ ವೇಳೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿರಲಿಲ್ವಾ? ಯೂತ್ ಕಾಂಗ್ರೆಸ್ನವರು ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರೊಟೆಸ್ಟ್ ನಡೆಸಿದ್ದಾರೆ ಎಂದರು.
ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದನ್ನು ಪ್ರಧಾನಿ ಮೋದಿ ಕೇಳುತ್ತಿದ್ದು, ಅವರು ಸರೆಂಡರ್ ಆಗಿದ್ದಾರೆ ಅಂತಲೂ ಗಂಭೀರ ಆರೋಪ ಮಾಡಿದ್ದಾರೆ.



