ಹೊಸದಿಗಂತ ಡಿಜಿಟಲ್ ಡೆಸ್ಕ್:
ಮರದ ಕೊಂಬೆ ಬಿದ್ದು ಯುವಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿಯ
ಅರಣ್ಯಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆನಕ್ ರಾಜ್ ಎಂಬುವವರು ಹನುಮಂತ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಿಬಿಎಂಪಿಯ ಮೂವರು ಅರಣ್ಯಾಧಿಕಾರಿಗಳಾದ ಆರ್‌ಎಫ್‌ಓ, ಎಸಿಎಫ್, ಡಿಎಫ್‌ಓ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯವೇ ಅಕ್ಷಯ್ ಸಾವಿಗೆ ಕಾರಣವಾಗಿದೆ. ಎ1 ಆರೋಪಿ ಆರ್‌ಎಫ್‌ಓ, ಎ2 ಆರೋಪಿ ಎಸಿಎಫ್, ಎ3 ಆರೋಪಿ ಡಿಎಫ್‌ಓ ಆಗಿದ್ದು, ಯುವಕನ ಸಾವಿಗೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಆರೋಪಿಗಳಾಗಿರುವ ಬಿಬಿಎಂಪಿ ಅರಣ್ಯಾಧಿಕಾರಿಗಳಿಗೆ ಕರೆದು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ.