ನಿರಂತರ ಮಳೆ: ಮನೆಗೋಡೆ ಕುಸಿದು ಯುವಕ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಗೋಡೆ ಕುಸಿದು ಯುವಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

ಅಥಣಿಯ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿ.

ನಿರಂತರ ಮಳೆಗೆ ಮನೆ ಗೋಡೆ ನೆನೆದು ಈ ಅವಘಡ ಸಂಭವಿಸಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಘಟನಾ ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!