ಗಣೇಶ ವಿಸರ್ಜನೆ ವೇಳೆ ಅವಘಡ: ಹೃದಯಾಘಾತದಿಂದ ಯುವಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗಣಪತಿ ವಿಸರ್ಜನೆ ವೇಳೆ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ‌

ಗಂಗಾವತಿಯ ಪ್ರಶಾಂತ ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಹೃದಯಾಘಾತದಿಂದ ಯುವಕ ಮೃತಪಟ್ಟಿದ್ದಾನೆ.

ಯುವಕ ಸುದೀಪ್ ಸಜ್ಜನ್ (30) ಹೃದಯಾಘಾತದಿಂದ ಮೃತಪಟ್ಟ ಯುವಕ.

ಮೆರವಣಿಗೆ ಸಾಗುತ್ತಿದ್ದ ವೇಳೆ ಸುದೀಪ್ ಡ್ಯಾನ್ಸ್ ಮಾಡುತ್ತಿದ್ದು, ಕೆಲ ಹೊತ್ತಿನ ಬಳಿಕ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಘಟನೆಯಿಂದ ಯುವಕರು ಸ್ವಯಂಪ್ರೇರಿತವಾಗಿ ಅರ್ಧಕ್ಕೆ ಡಿಜೆ ಬಂದ್‌ ಮಾಡಿದ್ದಾರೆ.

ಡಿಜೆಎ ಸೌಂಡ್‌ ನಿಂದ ಆತನಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!