ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆಯಷ್ಟೇ ಬೆಂಗಳೂರಿನ ಎಮ್‌ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು ಎನ್ನಲಾಗಿದೆ.
ಇದೀಗ ಮೃತರ ಪೋಷಕರು ಹಾಗೂ ಸಂಬಂಧಿಕರು ಆಸ್ಪತ್ರೆ ನಿರ್ಲಕ್ಷ್ಯದಿಂದಲೇ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಂಕಿ ಅವಘಡದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಘಣೀಕರ್ (34) ಸಾವನ್ನಪ್ಪಿದವರು. ಬೆಂಕಿ ಅವಘಡದಿಂದ ಯಾವುದೇ ಪ್ರಾಣ ಹಾನಿ ಆಗಿಲ್ಲ. ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದರು. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇನ್ನು, ಸಾವನ್ನಪ್ಪಿದ ಫಣೀಕರ್ ಹೆಚ್1ಎನ್1 ಇಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ರೋಗಿ ಗುಣಮುಖರಾಗಿದ್ದಾರೆ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದರು. ಅಗ್ನಿ ಅವಘಡಕ್ಕೂ ಮುನ್ನ ಕುಟುಂಬಸ್ಥರ ಜೊತೆ ರೋಗಿ ಮಾತನಾಡಿದ್ದ. ಆದರೆ ಆಸ್ಪತ್ರೆಯ ಸಿಸಿಯು ಯೂನಿಟ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದಾದ ಮೇಲೆ ಸಂಜೆ 4 ಗಂಟೆವರೆಗೂ ಕುಟುಂಬಸ್ಥರನ್ನ ನೋಡಲು ಸಿಬ್ಬಂದಿ ಬಿಟ್ಟಿಲ್ಲ. ರೋಗಿ ಸಾವಿಗೆ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.