ಇಂದು ಯುವ ದಸರಾಕ್ಕೆ ಚಾಲನೆ, 12 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ, ಇಂದು ಯುವ ದಸರಾಗೆ ಚಾಲನೆ ಸಿಗಲಿದ್ದು, ಸಾವಿರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇಂದು ಸಂಜೆ ಮೈಸೂರಿನ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಯುವ ದಸರಾ ಉದ್ಘಾಟನೆ ನಡೆಯಲಿದೆ. ಇಂದಿನಿಂದ ಅ.16ರವರೆಗೆ ಯುವ ದಸರಾ ಕಾರ್ಯಕ್ರಮ ನಡೆಯಲಿದೆ.

ಈ ಬಾರಿ ಯುವದಸರಾಗೆ ಸಚಿವ ಎಚ್.ಸಿ ಮಹದೇವಪ್ಪ, ಸಿನಿಮಾ ತಾರೆಯರಾದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಚಾಲನೆ ನೀಡಲಿದ್ದಾರೆ.

ಯುವ ದಸರಾ ಕಾರ್ಯಕ್ರಮದಲ್ಲಿ ನಾಡಿನೆಲ್ಲೆಡೆಯಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ, ಸಂಜೆ 5 ರಿಂದ ರಾತ್ರಿ 10 ಗಂಟೆವರೆಗೆ ಕಾರ್ಯಕ್ರಮ ನಡೆಯುತ್ತದೆ. ಲಕ್ಷಾಂತರ ಪ್ರವಾಸಿಗರು ಆಗಮಿಸಿ ಕಾರ್ಯಕ್ರಮ ವೀಕ್ಷಣೆ ಮಾಡಲಿದ್ದಾರೆ. ಒಟ್ಟಾರೆ 12 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!