Friday, March 31, 2023

Latest Posts

ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಜಗಳ: ಸಾವಿನಲ್ಲಿ ಅಂತ್ಯ

ಹೊಸ ದಿಗಂತ ವರದಿ , ಬೀದರ:

ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಲ್ಲಿ ಯುವಕನೊಬ್ಬ ಹತ್ಯೆಗೀಡಾದ ನಡೆದ ಘಟನೆ ಬೀದರ ನಗರದ ತ್ರಿಪುರಾಂತನಲ್ಲಿ ನಡೆದಿದೆ.

ತ್ರಿಪುರಾಂತ ನಿವಾಸಿ ಆನಂದ ಫುಲೆ(26) ಕೊಲೆಯಾದ ಯುವಕನಾಗಿದ್ದಾನೆ.

ತ್ರಿಪುರಾಂತನ ಮುಖ್ಯ ರಸ್ತೆ ಮೇಲೆ ಆನಂದ ಹಾಗೂ ದಿಗಂಬರ ದಾಸೂರೆ ಸೇರಿದಂತೆ ಕೆಲ ಯುವಕರ ನಡುವೆ ಜಗಳ ನಡೆದಿದ್ದು, ಈ ವೇಳೆ ಆನಂದ ಮೇಲೆ ಎದುರಾಳಿ ಗುಂಪಿನ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಆನಂದ ಫುಲೆಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಮ್ಮರಗಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಕರಣದಲ್ಲಿ ಗಾಯಗೊಂಡ ದಿಗಂಬರ ಎನ್ನುವಾತನಿಗೆ ಬೀದರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ಹುಮನಾಬಾದ ಎಎಸ್ಪಿ ಶಿವಾಂಶು ರಾಜಪುತ್, ಸಿಪಿಐ ಸುಶೀಲಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಗಳ ನಡೆದಿದೆ ಎನ್ನಲಾಗುತ್ತಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!