ಭಾರೀ ಮಳೆಗೆ ಆಯತಪ್ಪಿ ನದಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

ಹೊಸ ದಿಗಂತ ವರದಿ,ಮಂಗಳೂರು:

ಭಾನುವಾರ ವಿಟ್ಲ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ ನದಿಗೆ ಬಿದ್ದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಸಂಜೆ ವೇಳೆ ವ್ಯಕ್ತಿಯೊಬ್ಬರು ಸೇತುವೆಯಲ್ಲಿ ಹೋಗುತ್ತಿದ್ದಾಗ ಆಯತಪ್ಪಿ ಹೊಳೆಗೆ ಬಿದ್ದಿದ್ದಾರೆ.

ಕೂಡಲೇ ಅಲ್ಲೇ‌ ಇದ್ದ ಯುವಕರು ಹೊಳೆಯ ಪ್ರವಾಹವನ್ನೂ ಲೆಕ್ಕಿಸದೆ ಹಾರಿ ಈಜಾಡಿಕೊಂಡು ಹೋಗಿ ವ್ಯಕ್ತಿಯನ್ನು ರಕ್ಷಣೆ ಮಾಡಿ ಅಪಾಯದಿಂದ ರಕ್ಷಿಸಿದ್ದಾರೆ.

ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್‌ ಸಿ.ಎಚ್. ಹಾಗೂ ಸುರೇಶ್ ಸಿ.ಎಚ್. ರಕ್ಷಣೆ‌ ಮಾಡಿದ ಯುವಕರು. 70ರ ಹರೆಯದ ಉಮ್ಮರ್ ರಕ್ಷಿಸಲ್ಪಟ್ಟವರು.
ಉಮ್ಮರ್ ಅವರು ಹೊಳೆಗೆ ಬೀಳುವುದನ್ನು ನೋಡಿದ ಕೂಡಲೇ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಇಬ್ಬರು ಯುವಕರು ನದಿಗೆ ಹಾರಿ ಈಜಾಡಿಕೊಂಡು ಹೋಗಿ ಉಮ್ಮರ್ ಅವರನ್ನು ರಕ್ಷಿಸಿದ್ದಾರೆ.

ಕೂಡಲೇ ಸ್ಥಳದಲ್ಲೇ ಇದ್ದ ಸ್ಥಳೀಯರು ಸಾಥ್ ಕೊಟ್ಟಿದ್ದಾರೆ. ಯುವಕರ ಸಮಯಪ್ರಜ್ಞೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಸೇತುವೆಗೆ ಯಾವುದೇ ರೀತಿಯ ತಡೆ ಇಲ್ಲದೆ ಇರುವುದು ಇದಕ್ಕೆ‌ ಕಾರಣವಾಗಿದೆನ್ನಲಾಗಿದೆ

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!