ತಾಜ್‌ಮಹಲ್‌ಗೆ ಬಂದು ಪಾಕ್ ಪರ ಘೋಷಣೆ ಕೂಗಿದ ಯುವಕರು: ಥಳಿಸಿ ಪೊಲೀಸರಿಗೆ ಒಪ್ಪಿಸಿದ ಜನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಗ್ರಾದ ತಾಜ್‌ಮಹಲ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಜ್ ಮಹಲ್ ಬಳಿ ನಿಂತು ಪಾಕಿಸ್ತಾನದ ಪರ ಘೋಷಣೆ ಕೂಗಿದ ಇಬ್ಬರನ್ನು ಪ್ರವಾಸಿಗರು ಥಳಿಸಿದ್ದಾರೆ. ತದನಂತರ ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಗಂಜ್ ಪೊಲೀಸರು ಮಾಹಿತಿ ನೀಡಿದ್ದು, ಅವರು ಯಾವ ರೀತಿ ಘೋಷಣೆ ಕೂಗಿದ್ದಾರೆ ಎನ್ನುವ ಮಾಹಿತಿ ಇಲ್ಲ. ಒಟ್ಟಾರೆ ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!