ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಯೂಟ್ಯೂಬರ್ ಹಾಗೂ ಬಿಗ್ ಬಾಸ್ 17 ಸ್ಪರ್ಧಿಯಾಗಿದ್ದ ಅನುರಾಗ್ ದೋಭಾಲ್ ಅವರ ಆರೋಗ್ಯ ಸ್ಥಿತಿ ಮತ್ತೆ ಚಿಂತಾಜನಕವಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಐಸಿಯುಗೆ ದಾಖಲಿಸಲಾಗಿದೆ.
ಕೆಲ ದಿನಗಳ ಹಿಂದೆ ಅಪಘಾತದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಐಸಿಯುನಿಂದ ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗಿತ್ತು.
ಅನುರಾಗ್ ಅವರ ಮ್ಯಾನೇಜರ್ ರೋಹಿತ್ ಪಾಂಡೆ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಪಘಾತದ ವೇಳೆ ಶ್ವಾಸಕೋಶಕ್ಕೆ ಗಾಯವಾಗಿದ್ದ ಕಾರಣ ಈಗ ಅಲ್ಲಿ ತೀವ್ರ ಸೋಂಕು ಉಂಟಾಗಿ ನ್ಯುಮೋನಿಯಾ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ. ವೈದ್ಯರ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:
ಕೆಲ ದಿನಗಳ ಹಿಂದೆ ಐಸಿಯುನಿಂದ ಹೊರಬಂದ ಅನುರಾಗ್ ಅವರ ಫೋಟೋ ಹಂಚಿಕೊಂಡಾಗ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದರು. ಆ ಚಿತ್ರದಲ್ಲಿ ಅವರು ನಗುಮುಖದಿಂದ ವಿಕ್ಟರಿ ಸಿಂಬಲ್ ತೋರಿಸಿದ್ದರು. ಆದರೆ ಈಗ ಮತ್ತೆ ಆರೋಗ್ಯ ಹದಗೆಟ್ಟಿರುವುದು ಅಭಿಮಾನಿಗಳಲ್ಲಿ ಆತಂಕ ಉಂಟುಮಾಡಿದೆ.
ಇತ್ತೀಚೆಗೆ ಸಂಭವಿಸಿದ ಕಾರು ಅಪಘಾತದ ಬಳಿಕ ಅನುರಾಗ್ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಗಮನದಿಂದ ಪರಿಶೀಲಿಸುತ್ತಿದ್ದು, ಚೇತರಿಕೆಗೆ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ.



