April 29, 2026
Wednesday, April 29, 2026
spot_img

ನೇಣು ಬಿಗಿದುಕೊಂಡು ಯೂಟ್ಯೂಬರ್ ಆತ್ಮಹ*ತ್ಯೆ: ಪ್ರೀತಿಯೇ ಪಾಶವಾಯ್ತಾ ಈಕೆಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈದರಾಬಾದ್‌ನಲ್ಲಿ 21 ವರ್ಷದ ಯೂಟ್ಯೂಬರ್ ಹಾಗೂ ವಿದ್ಯಾರ್ಥಿನಿಯೊಬ್ಬಳು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಮೃತಳನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದ ಬೋನು ಕೋಮಲಿ ಎಂದು ಗುರುತಿಸಲಾಗಿದೆ.

ಕಳೆದ 11 ತಿಂಗಳಿಂದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಕೋಮಲಿ, ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಯೂಟ್ಯೂಬ್‌ನಲ್ಲಿ ಲೈಫ್‌ಸ್ಟೈಲ್ ವಿಡಿಯೊಗಳನ್ನು ಪ್ರಕಟಿಸುತ್ತಿದ್ದಳು. ಸೋಮವಾರ ಮುಂಜಾನೆ ಕುವೈತ್‌ನಲ್ಲಿ ಕೆಲಸ ಮಾಡುತ್ತಿರುವ ತಾಯಿಗೆ “ಐ ಲವ್ ಯು ಮಮ್ಮಿ” ಎಂದು ವಾಟ್ಸಾಪ್ ಸಂದೇಶ ಕಳುಹಿಸಿದ್ದಳು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕ ಕಡಿತಗೊಂಡಿತ್ತು.

ಇದನ್ನೂ ಓದಿ:

ಗಾಬರಿಗೊಂಡ ತಾಯಿ ಸ್ನೇಹಿತರ ಮೂಲಕ ಫ್ಲಾಟ್ ಪರಿಶೀಲಿಸಲು ತಿಳಿಸಿದ್ದಾರೆ. ಮಧ್ಯಾಹ್ನ ಸ್ನೇಹಿತ ಬಾಗಿಲು ಒಡೆದು ಒಳನುಗ್ಗಿದಾಗ, ಕೋಮಲಿ ಸೀರೆಯಿಂದ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಸ್ಥಳದಲ್ಲೇ ಏಣಿ ಹಾಗೂ ಸೀರೆ ವಶಕ್ಕೆ ಪಡೆಯಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ಸಂಬಂಧದ ಸಮಸ್ಯೆಯಿಂದ ಖಿನ್ನತೆಗೊಂಡಿದ್ದಾಳೆ ಎಂಬ ಅನುಮಾನ ವ್ಯಕ್ತವಾಗಿದೆ. ಮೂರು ವರ್ಷಗಳಿಂದ ಸಂಬಂಧದಲ್ಲಿದ್ದ ಯುವಕನೊಂದಿಗೆ ಇತ್ತೀಚೆಗೆ ದೂರವಾಗಿದ್ದಳು ಎನ್ನಲಾಗಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ, ಡಿಜಿಟಲ್ ಸಾಕ್ಷ್ಯಗಳ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !