Wednesday, September 3, 2025

ಧರ್ಮಸ್ಥಳ ಪ್ರಕರಣದ ಹಿಂದೆ ಯೂಟ್ಯೂಬರ್‌ಗಳ ಕೈವಾಡ: ಎಸ್‌ಐಟಿಯಲ್ಲಿ ಮತ್ತೊಂದು ದೂರು ದಾಖಲು!


ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತುಹಾಕಲಾಗಿದೆ ಎಂಬ ಪ್ರಕರಣದಲ್ಲಿ ಯೂಟ್ಯೂಬರ್‌ಗಳ ಕೈವಾಡವಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಸತ್ಯ ಬಹಿರಂಗಪಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಶಾಂತ್ ಸಂಬರಗಿ ಎಂಬವರು ಎಸ್‌ಐಟಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಗೆ ನೀಡಿರುವ ಅವರು, ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. ಆದರೆ ಕೆಲವು ಯೂಟ್ಯೂಬ್ ಚಾನೆಲ್‌ಗಳು ಸುದ್ದಿಯನ್ನು ಬಿತ್ತರಿಸಿವೆ. ಪ್ರೊಟೆಕ್ಟೆಡ್ ವಿಟ್ನೆಸ್ ಸ್ಕೀಮ್ ಅಡಿಯಲ್ಲಿದ್ದ ಚಿನ್ನಯ್ಯನ ಕಾನೂನು ಬಾಹಿರವಾಗಿ ಸಂದರ್ಶನ ಮಾಡಿದ್ದಾರೆ. ಚಿನ್ನಯ್ಯನ್ನ ಸಂದರ್ಶನವನ್ನು ದೂರು ದಾಖಲಾತಿಗೂ ಮುನ್ನ ಅಥವಾ ದೂರು ದಾಖಲಾದ ನಂತರ ಅಥವಾ ಆರೋಪಿಯಾದ ನಂತರ ಈ ಮೂರು ರೀತಿಯಲ್ಲಿಯೂ ಸಂದರ್ಶನ ತೆಗೆದುಕೊಂಡಿದ್ದಾರೆ. ಇದು ಅಪರಾಧ. ಈ ಯೂಟ್ಯೂಬರ್ ಗಳ ಹಣಕಾಸಿನ ಬಗ್ಗೆ ತನಿಖೆ ಆಗಬೇಕು ಎಂಬ ದೃಷ್ಟಿಯಲ್ಲಿ ಎಸ್‌ಐಟಿಗೆ ದೂರು ನೀಡಲಾಗಿದೆ. ದೂರು ಸ್ವೀಕರಿಸಿರುವ ಅಧಿಕಾರಿಗಳು ಹಿಂಬರಹ ನೀಡಿದ್ದಾರೆ ಎಂದು ಎಂದು ಹೇಳಿದ್ದಾರೆ.

ಇದನ್ನೂ ಓದಿ