ಆಂಧ್ರಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷೆಯಾಗಿ ವೈ.ಎಸ್ ಶರ್ಮಿಳಾ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶ ಸಿಎಂ ಜಗನ್ ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್ ಶರ್ಮಿಳಾ ಅವರನ್ನು ಆಂಧ್ರಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.

ದೆಹಲಿಯಲ್ಲಿ ಹಿರಿಯ ಕಾಂಗ್ರೆಸ್‌ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ್ದರು.ಕಳೆದ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಶರ್ಮಿಳಾ ಅವರು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದರು. ಕಾಂಗ್ರೆಸ್‌ ಸೇರಿದ ಬಳಿಕ ಶರ್ಮಿಳಾ ಸ್ಥಾಪಿಸಿದ್ದ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ನಲ್ಲಿ ವಿಲೀನ ಮಾಡಿದರು.

ವೈ.ಎಸ್.ಶರ್ಮಿಳಾ ಅವರನ್ನು ಆಂಧ್ರಪ್ರದೇಶ ರಾಜ್ಯ ಘಟಕದ ನೂತನ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!