ಕಾಂಗ್ರೆಸ್ ಸೇರಿದ ವೈ.ಎಸ್. ಶರ್ಮಿಳಾ: ‘ಕೈ’ ಜೋಡಿಸಿದ ವೈಎಸ್‌ಆರ್ ತೆಲಂಗಾಣ ಪಕ್ಷ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೈಎಸ್‌ಆರ್ ಪಕ್ಷದ ಸಂಸ್ಥಾಪಕಿ ವೈ.ಎಸ್. ಶರ್ಮಿಳಾ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಇದರೊಂದಿಗೆ ಕಾಂಗ್ರೆಸ್ ಜೊತೆ ವೈಎಸ್‌ಆರ್ ತೆಲಂಗಾಣ ಪಕ್ಷ ವಿಲೀನವಾಗಿದೆ. ತಡರಾತ್ರಿ ದೆಹಲಿಗೆ ಶರ್ಮಿಳಾ ಆಗಮಿಸಿದ್ದು, ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸಮ್ಮುಖದಲ್ಲಿ ಶರ್ಮಿಳಾ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

 ಕಾಂಗ್ರೆಸ್‌ನ ಉನ್ನತ ನಾಯಕರನ್ನು ಭೇಟಿ ಮಾಡಿ ನಂತರ ದೆಹಲಿಯಲ್ಲಿ ನಿರ್ಣಯವನ್ನು ಘೋಷಿಸುತ್ತೇವೆ ಎಂದು ಈ ಹಿಂದೆಯೇ ಶರ್ಮಿಳಾ ಹೇಳಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!