ವೈಎಸ್​ಆರ್ ತೆಲಂಗಾಣ ಅಧ್ಯಕ್ಷೆ ಶರ್ಮಿಳಾ ಬಂಧನ: ಹೈದರಾಬಾದ್​ಗೆ ಸ್ಥಳಾಂತರ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಹೋದರಿ, ವೈಎಸ್​ಆರ್​ಟಿಸಿ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರನ್ನು ಸೋಮವಾರ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ಅಲ್ಲಿಂದ ಸ್ಥಳಾಂತರ ಸಹ ಮಾಡಿದ್ದಾರೆ. ಪಾದಯಾತ್ರೆ ನಡೆಸುತ್ತಿದ್ದಾಗ ಶರ್ಮಿಳಾ ಬೆಂಬಲಿಗರು ಮತ್ತು ಕೆಸಿಆರ್ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು ಇದನ್ನು ಹತ್ತಿಕ್ಕುವ ಉದ್ದೇಶದಿಂದ ತೆಲಂಗಾಣದ ಪೊಲೀಸರು ವೈಎಸ್ ಶರ್ಮಿಳಾ ಅವರನ್ನು ಬಂಧಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ರಾಜ್ಯ ಸರ್ಕಾರದ ದುರಾಡಳಿತ ಖಂಡಿಸಿ ಶರ್ಮಿಳಾ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, ಆಡಳಿತಾರೂಢ ಪಕ್ಷವನ್ನು ಟೀಕಿಸುತ್ತಾ ಬಂದಿದ್ದರು. ಭಾನುವಾರ ಟಿಆರ್‌ಎಸ್ ಪಕ್ಷದ ನಾಯಕ ಸುದರ್ಶನ್ ರೆಡ್ಡಿ ವಿರುದ್ಧ ತೀವ್ರವಾಗಿ ಟೀಕಿಸಿದ್ದರು. ಇದರಿಂದ ಕುಪಿತರಾದ ಟಿಆರ್‌ಎಸ್ ಪಕ್ಷದ ಕಾರ್ಯಕರ್ತರು ಅವರ ವಾಹನದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದರು. ಇದಕ್ಕೆ ಪ್ರತಿಯಾಗಿ ವೈಎಸ್ ಶರ್ಮಿಳಾ ಬೆಂಬಲಿಗರು ಸಹ ಈ ಕೃತ್ಯದಿಂದ ಕೆರಳಿ ಕೆಂಡವಾದರು. ಉಭಯ ಪಕ್ಷದ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಘರ್ಷಣೆಗೆ ಕಾರಣವಾಯಿತು. ಈ ಕೃತ್ಯ ಖಂಡಿಸಿ ಶರ್ಮಿಳಾ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಶಾಂತಿ ಕದಡಿದ್ದಕ್ಕಾಗಿ ಪೊಲೀಸರು ಇದೀಗ ಶರ್ಮಿಳಾ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!