February 3, 2026
Tuesday, February 3, 2026
spot_img

ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುಮಾರು ಒಂದು ವರ್ಷದ ರಾಷ್ಟ್ರಪತಿ ಆಳ್ವಿಕೆಗೆ ತೆರೆ ಬೀಳುವ ಕಾಲ ಹತ್ತಿರವಾಗಿದ್ದು, ಈಶಾನ್ಯ ರಾಜ್ಯ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಸುದೀರ್ಘ ಜನಾಂಗೀಯ ಹಿಂಸಾಚಾರದ ಹಿನ್ನೆಲೆಯಲ್ಲಿ 2025ರ ಫೆಬ್ರವರಿ 9ರಂದು ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ರಾಜ್ಯದಲ್ಲಿ ಅಸ್ಥಿರತೆ ಉಂಟಾಗಿತ್ತು. ಇದೀಗ ಅನುಭವೀ ನಾಯಕನಿಗೆ ಬಿಜೆಪಿ ಮಣಿಪುರದ ಜವಾಬ್ದಾರಿ ನೀಡಿದೆ.

ಮಣಿಪುರದ ಶಾಸಕರ ನಿಯೋಗವು ನವದೆಹಲಿಯಲ್ಲಿ ಅಮಿತ್ ಶಾ ಸೇರಿದಂತೆ ಕೇಂದ್ರ ನಾಯಕತ್ವದೊಂದಿಗೆ ನಡೆಸಿದ ಸರಣಿ ಸಭೆಗಳ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.

2017 ರಿಂದ 2022 ರವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಖ್ಯಾತಿ ಇವರದ್ದು. 2022ರ ಚುನಾವಣೆಯ ನಂತರ ಬಿರೇನ್ ಸಿಂಗ್ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ, ಶಿಕ್ಷಣ ಮತ್ತು ವಸತಿ ಖಾತೆಗಳಂತಹ ಪ್ರಮುಖ ಇಲಾಖೆಗಳನ್ನು ಇವರು ನಿಭಾಯಿಸಿದ್ದರು.

ಇದನ್ನೂ ಓದಿ:

ಸಿಂಗ್ಜಮೈ ವಿಧಾನಸಭಾ ಕ್ಷೇತ್ರದಿಂದ ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ರಾಷ್ಟ್ರಪತಿ ಆಳ್ವಿಕೆಯಿಂದ ತತ್ತರಿಸಿದ್ದ ರಾಜ್ಯದಲ್ಲಿ ಎರಡನೇ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಖೇಮ್ಚಂದ್ ಸಿಂಗ್ ಅವರಿಗೆ, ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸುವುದು ಮತ್ತು ಅಭಿವೃದ್ಧಿ ವೇಗ ಹೆಚ್ಚಿಸುವುದು ದೊಡ್ಡ ಸವಾಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !