ಯುವ ದಸರಾಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ: ಅ.3ರವರೆಗೆ ಸಂಗೀತ, ನೃತ್ಯದ ರಸಸಂಜೆ

ಹೊಸದಿಗಂತ ವರದಿ ಮೈಸೂರು:‌

ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಯುವ ದಸರಾ ಕಾರ್ಯಕ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ದಸರಾಗೆ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ಯುವ ದಸರಾದಲ್ಲಿ ಗೋಲ್ಡ್ ಪಾಸ್ ಹೊರತುಪಡಿಸಿ ಬೇರೆ ಯಾವುದೇ ಪಾಸ್ ಇರುವುದಿಲ್ಲ ಎಂದರು.

ಯುವ ಸಂಭ್ರಮ/ಯುವ ದಸರಾ ಉಪ ಸಮಿತಿ ವತಿಯಿಂದ ನಾಳೆಯಿಂದ ಅ.3ರವರೆಗೆ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಯುವ ದಸರಾ ಕಾರ್ಯಕ್ರಮದ ಮಾಹಿತಿ ನೀಡಿದ ಸಚಿವ

  • (ಸೆ.28) ರಂದು ನಾಳೆ ಸಂಜೆ  “ಅಪ್ಪು ನಮನ” ಕಾರ್ಯಕ್ರಮ 7ಗಂಟೆಯಿಂದ ನಡೆಯಲಿದ್ದು ಖ್ಯಾತ ಹಿನ್ನೆಲೆ ಗಾಯಕರಾದ ಗುರುಕಿರಣ್, ವಿಜಯ ಪ್ರಕಾಶ್, ಕುನಾಲ್ ಗಾಂಜಾವಾಲ ಕಾರ್ಯಕ್ರಮ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ದಿ.ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಹಾಗೂ ನಟ ಶಿವರಾಜ್ ಕುಮಾರ್ ಬರಲಿದ್ದಾರೆ.
  • ಸೆ.29ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ನೃತ್ಯ ತಂಡದಿಂದ ನೃತ್ಯ ಪ್ರದರ್ಶನ, ಹಿನ್ನೆಲೆ ಗಾಯಕಿ ಕನ್ನಿಕಾ ಕಪೂರ್ ರವರಿಂದ ಸಂಗೀತ ರಸಸಂಜೆ ನಡೆಯಲಿದೆ.
  • ಸೆ.30ರಂದು ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ, ಸ್ಥಳೀಯ ಕಲಾವಿದರಿಂದ ಕಾರ್ಯಕ್ರಮ, ಲೇಸರ್ ಆಕ್ಟ್ & ಸಿಗ್ನೇಚರ್ ಗ್ರೂಪ್ ನೃತ್ಯ ತಂಡದಿಂದ ನೃತ್ಯ ರೂಪಕ, ಸ್ಯಾಂಡಲ್ ವುಡ್ ನೈಟ್ ನಡೆಯಲಿದೆ.
  • ಅ.1ರಂದು ಗಾಯಕ ಸೋನು ನಿಗಮ್, ಗಾಯಕಿ ಡಾ.ಶಮಿತಾ ಮಲ್ನಾಡ್ ರಿಂದ ಸಂಗೀತ ರಸಮಂಜರಿ.
  • ಅ.2ರಂದು ಖ್ಯಾತ ಚಿತ್ರತಾರೆಯರಾದ ಹರ್ಷಿಕಾ ಪೂಣಚ್ಚ, ವಿಜಯರಾಘವೇಂದ್ರ ಅವರಿಂದ ಕನ್ನಡ ಸ್ಟಾರ್ ನೈಟ್, ಗಾಯಕಿ ಮಂಗ್ಲಿ ಗಾಯಕ ಅಮಿತ್ ತ್ರಿವೇದಿ ಅವರಿಂದ ಸಂಗೀತ ರಸಮಂಜರಿ.
  • ಅ.3ರಂದು ಸುಪ್ರಿಯಾ ರಾಮ್ &ಮಹಿಳಾ ಬ್ಯಾಂಡ್ ತಂಡದವರಿಂದ ಪ್ರದರ್ಶನ, ಫ್ಯಾಷನ್ ಶೋ, ಗಾಯಕಿ ಸುನಿಧಿ ಚೌಹಾಣ್ ರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

ಇದೇ ವೇಳೆ  “ಆರೋಗ್ಯ ದಸರಾ” ವನ್ನು ಉದ್ಘಾಟಿಸಿದ ಸಚಿವ ಸೋಮಶೇಖರ್‌, ಬಳಿಕ ವೈದ್ಯಕೀಯ ವಸ್ತುಪ್ರದರ್ಶನವನ್ನು ವೀಕ್ಷಿಸಿದರು. ಇವರಿಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್, ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್ ಉಪಮೇಯರ್ ರೂಪಾ ಸಾಥ್‌ ನೀಡಿದ್ರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!