ಪಾಕಿಸ್ತಾನ ಸಚಿವ ಬಿಲಾವಲ್​​ ಭುಟ್ಟೋ ಭಾವಚಿತ್ರ ದಹಿಸಿ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರತಿಭಟನೆ

ಹೊಸದಿಗಂತ ವರದಿ ವಿಜಯಪುರ:

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪಾಕಿಸ್ತಾನ ಸಚಿವ ಬಿಲಾವಲ್​​ ಭುಟ್ಟೊ ಭಾವಚಿತ್ರ ದಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಗಾಂಧಿಚೌಕ್ ನಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡರು ಮಾತನಾಡಿ, ಉಗ್ರರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್​ ನಾಯಕರಿಗೆ ದೇಶದ ಬಗ್ಗೆ ಗೌರವ ಇಲ್ಲ ಎಂದು ಕಿಡಿಕಾರಿದರು.

ಪಾಕಿಸ್ತಾನ ಸಚಿವ ಭುಟ್ಟೊ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಭುಟ್ಟೊ ತಕ್ಷಣವೇ ಕ್ಷಮೆಯಾಚಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!