Friday, March 31, 2023

Latest Posts

ಸಕ್ಕರೆ ನಾಡಿನಲ್ಲಿ ನಾಳೆ ಯುವಮೋರ್ಚಾ ಸಮಾವೇಶ

ಹೊಸದಿಗಂತ ವರದಿ ಮಂಡ್ಯ :

ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ ನಗರದ ಮೈಷುಗರ್ ಮೈದಾನದಲ್ಲಿ ಯುವ ಮೋರ್ಚಾ ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ತಾಲೂಕಿನ ಇಂಡುವಾಳು ಗ್ರಾಮದಿಂದ ಬೈಕ್ ರ್ಯಾಲಿ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿಶೃತ್ ನಾಗಣ್ಣ ತಿಳಿಸಿದರು.

ನಗರದ ಮೈಷುಗರ್ ಮೈದಾನದಲ್ಲಿ ನಡೆಯುತ್ತಿರುವ ಸಿದ್ಧತಾ ಕಾರ‌್ಯವನ್ನು ಪರಿಶೀಲಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಯುವಜನರನ್ನು ಸೆಳೆಯುವ ಉದ್ದೇಶದಿಂದ ಸಂಘಟನಾತ್ಮಕ ಚಟುವಟಿಕೆಯಲ್ಲಿ ತೊಡಗಿದ್ದೇವೆ. ಪಕ್ಷದ ರಾಷ್ಟ್ರೀಯ ನಾಯಕರು ಸಹ ಜಿಲ್ಲೆಗೆ ಆಗಮಿಸಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ ಎಂದರು.

ದೇಶದ ಯುವಶಕ್ತಿಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಜಿಲ್ಲೆಯಲ್ಲೂ ಯುವ ಸಮಾವೇಶವನ್ನು ಹಮ್ಮಿಕೊಂಡಿದ್ದು, ಯುವಜನರು ಹೆಚ್ಚಿನ ಸಂಖ್ಯೆಲ್ಲಿ ಬೈಕ್ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ನಗರದ ಜ್ಯೋತಿ ಇಂಟರ್ ನ್ಯಾಷನಲ್ ಬಳಿಯಿಂದ ವೇದಿಕೆಯವರೆಗೆ ಬೈಕ್ ರ್ಯಾಲಿ ಶೋಭಾಯಾತ್ರೆ ನಡೆಯಲಿದೆ ಎಂದು ಹೇಳಿದರು.

ಸಮಾವೇಶಕ್ಕಾಗಿ ಈಗಾಗಲೇ ನಗರ ಸಜ್ಜುಗೊಂಡಿದೆ. ಜಿಲ್ಲಾದ್ಯಂತ ಯುವಜನರು ಸಹ ಸಮಾವೇಶದಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ. ನಮ್ಮ ನಾಯಕರಾದ ಬಿ.ವೈ. ವಿಜಯೇಂದ್ರ, ರಾಷ್ಟ್ರೀಯ ಪ್ರಧಾನ ಕಾರ‌್ಯದರ್ಶಿ ಸಿ.ಟಿ. ರವಿ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ರಾಜ್ಯದ ವಿವಿಧ ನಾಯಕರು ಆಗಮಿಸಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್, ಮಂಡ್ಯ ಜಿಲ್ಲಾ ಪ್ರಬಾರಿ ಜಗದೀಶ್ ಹಿರೇಮಣಿ, ಜಿಲ್ಲೆಯ ನಾಯಕರೂ ಸಹ ಸಮಾವೇಶದಲ್ಲಿ ಪಾಲ್ಲೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮುದಾಯ ಭಾಗವಹಿಸಬೇಕು ಎಂದು ವಿಶೃತ್ ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!