ಯುವರಾಜ್ ಸಿಂಗ್- ಹೇಜಲ್ ಕೀಚ್ ದಂಪತಿಗೆ ಗಂಡು ಮಗು, ಯುವಿ ಸಂಭ್ರಮಕ್ಕೆ ಪಾರವೇ ಇಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಗಂಡು ಮಗುವಿನ ತಂದೆಯಾಗಿದ್ದಾರೆ.
ಪತ್ನಿ ಹೇಜಲ್ ಕೀಚ್ ನಿನ್ನೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಬಗ್ಗೆ ಯುವರಾಜ್ ಟ್ವಿಟರ್‌ನಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ. ದೇವರು ನಮಗೆ ಗಂಡು ಮಗು ನೀಡಿ ಹರಸಿದ್ದಾನೆ. ಈ ವಿಷಯವನ್ನು ನಿಮ್ಮ ಜೊತೆ ಶೇರ್ ಮಾಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.

ನಮ್ಮ ಮಗುವನ್ನು ಜಗತ್ತಿಗೆ ಸ್ವಾಗತಿಸುವ ಈ ಸಂದರ್ಭದಲ್ಲಿ ನಮ್ಮ ಗೌಪ್ಯತೆಯನ್ನು ಗೌರವಿಸಬೇಕೆಂದು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಕ್ರಿಕೆಟಿಗರು ಹಾಗೂ ಬಾಲಿವುಡ್ ಮಂದಿ ಇವರಿಬ್ಬರೂ ಕಂಗ್ರಾಟ್ಸ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!