ಹೊಸದಿಗಂತ ಆನ್ಲೈನ್ ಡೆಸ್ಕ್:
ಜಾತಿ ನಿಂದನೆ ಆರೋಪದ ಅನ್ವಯ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ವರ್ಷ ರೋಹಿತ್ ಶರ್ಮಾ ಜೊತೆಗಿನ ಸಂವಾದದಲ್ಲಿ ಯುವರಾಜ್ ಪರಿಶಿಷ್ಟ ಜಾತಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಯುವರಾಜ್ರನ್ನು ಬಂಧಿಸಿದ್ದಾರೆ.
ವಿಚಾರಣೆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನದ ಹಿಂದೆ ಯುವರಾಜ್ ಹೈಕೋರ್ಟ್ಗೆ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದರು. ಅದರಿಂದ ಪೊಲೀಸರು ಔಪಚಾರಿಕವಾಗಿ ಬಂಧಿಸಿ ಮೂರು ಗಂಟೆಗಳ ವಿಚಾರಣೆ ನಡೆಸಿ, ಬಿಡುಗಡೆ ಮಾಡಿದ್ದಾರೆ.
2020ರಲ್ಲಿ ರೋಹಿತ್ ಶರ್ಮಾ ಜೊತೆಗೆ ಯುವರಾಜ್ ಲೈವ್ ಚಾಟ್ನಲ್ಲಿ ಭಾಗವಹಿಸಿದ್ದರು. ಮಾತಿನ ಮಧ್ಯೆ ಯಜುವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದ್ದರು. ಈ ವಿಚಾರ ವೈರಲ್ ಆಗುತ್ತಿದ್ದಂತೆ ಕ್ಷಮೆ ಕೇಳಿದ್ದರು.