ದಾಂಪತ್ಯ ಜೀವನದಲ್ಲಿನ ಬಿರುಕು ವಿಚಾರಕ್ಕೆ ಬ್ರೇಕ್ ಕೊಟ್ಟ ಯುಜ್ವೇಂದ್ರ ಚಹಾಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ಕ್ರಿಕೆಟ್ ತಂಡದ ಸ್ಟಾರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹಬ್ಬುತ್ತಿದ್ದ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ.

ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ನಡುವಿನ ಸಂಬಂಧದ ಬಗ್ಗೆ ಸಾಕಷ್ಟು ಊಹಾಪೋಹಗಳು ಮತ್ತು ವದಂತಿಗಳು ಹಬ್ಬಿದ್ದವು. ಇದನ್ನು ಗಮನಿಸಿದ ಚಹಾಲ್ ವದಂತಿಗಳಿಗೆ ಸ್ಪಷ್ಟೀಕರಣವನ್ನು ನೀಡಿದ್ದಾರೆ.


ಚಹಲ್ ಪತ್ನಿ ಧನಶ್ರೀ ತನ್ನ ಸೋಶಿಯಲ್ ಮೀಡಿಯಾ ಖಾತೆಯಿಂದ ಚಹಾಲ್ ಹೆಸರನ್ನು ತೆಗೆದ ಬಳಿಕ ವದಂತಿಗಳು ಹಬ್ಬಲು ಆರಂಭಿಸಿದ್ದು, ಇಬ್ಬರ ನಡುವೆ ಎಲ್ಲವೂ ಸರಿಯಾಗಿಲ್ಲ ಎಂದು ಊಹಿಸಲು ಪ್ರಾರಂಭಿಸಿದ್ದರು.

ಈ ವದಂತಿಗಳಿಗೆ ಈಗ ತೆರೆ ಎಲೆದಿರುವ ಯುಜ್ವೇಂದ್ರ ಚಹಾಲ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಒಂದನ್ನು ಹಾಕಿದ್ದು, ಇದರಲ್ಲಿ ಅವರು ತಮ್ಮ ಸಂಬಂಧದ ಬಗ್ಗೆ ಎದ್ದಿರುವ ವದಂತಿಗಳನ್ನು ಅಲ್ಲಗಳೆದಿದ್ದಾರೆ. ನಮ್ಮ ವೈವಾಹಿಕ ಬದುಕಿಗೆ ಸಂಬಂಧಿಸಿದ ವದಂತಿಗಳನ್ನು ನಂಬಬೇಡಿ ಎಂದು ನಿಮಗೆಲ್ಲರಿಗೂ ವಿನಮ್ರ ವಿನಂತಿ. ದಯವಿಟ್ಟು ಇದನ್ನೆಲ್ಲ ನಿಲ್ಲಿಸಿ ಎಂದು ನೆಟ್ಟಿಗರ ಬಳಿವಿನಂತಿ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!